-
ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ
ಅಮಂಗಳೂರು, ಮಾ. 31: ದ.ಕ. ಜಿಲ್ಲೆಯ ಜನರಿಗೆ ಎಲ್ಲ ಅಗತ್ಯ ವಸ್ತುಗಳು ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಲಭ್ಯವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಎರಡು ದಿನಗಳ ಸಂಪೂರ್ಣ ಬಂದ್ ಬಳಿಕ ಮಂಗಳವಾರದಂದು ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಬುಧವಾರದ ಬಳಿಕ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ.
ಇನ್ನು ಬುಧವಾರದಿಂದ ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂಬುವುದಾಗಿ ಸಚಿವರು ತಿಳಿಸಿದ್ದಾರೆ.
ಮಂಗಳವಾರದಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದ ಸಂದರ್ಭ ಜನರು ಮಂಗಳೂರು ನಗರದಾದ್ಯಂತ ಮುಗಿಬಿದ್ದು ಖರೀದಿಯಲ್ಲಿ ತೊಡಗಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಜನರು ವಿಫಲರಾಗಿದ್ದರು. ಎರಡು ದಿನಗಳ ಕಾಲ ಬಂದ್ ಇದ್ದ ಪರಿಣಾಮ ಜನರು ಮಂಗಳವಾರ ಮುಗಿಬಿದ್ದು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು.
ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆ, ಕದ್ರಿ ಮಾರುಕಟ್ಟೆ, ಮಲ್ಲಿಕಟ್ಟೆ ಮಾರುಕಟ್ಟೆ ಸೇರಿದಂತೆ ಹಲವು ಮಾರುಕಟ್ಟೆಗಳಲ್ಲಿ ಮುಗಿಬಿದ್ದು ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬುಧವಾರದಿಂದ ಮಧ್ಯಾಹ್ನದ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.