ಮದ್ಯಪ್ರಿಯರಿಗೆ ಶಾಕಿಂಗ್‌ ನ್ಯೂಸ್ ➤ ಅಬಕಾರಿ ಇಲಾಖೆಯ ಹೊಸ ಆದೇಶ ಕೇಳಿ ಮದ್ಯ ಪ್ರಿಯರು ಕಂಗಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.31. ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದ್ದು, ದೇಶಾದ್ಯಂತ ಎಪ್ರಿಲ್ 14 ರವರೆಗೆ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಎ.14ರ ಮಧ್ಯರಾತ್ರಿವರೆಗೆ ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚುವಂತೆ ಅಬಕಾರಿ ಆಯುಕ್ತರು ಆದೇಶಿಸಿದ್ದಾರೆ.

ಮಾರ್ಚ್ 31ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟದ ಎಲ್ಲಾ ಮಳಿಗೆಗಳನ್ನು ಮುಚ್ಚಲು ಈ ಹಿಂದೆ ಆದೇಶಿಸಲಾಗಿತ್ತು. ಆದರೆ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಎ.14ರವರೆಗೆ ರಾಜ್ಯಾದ್ಯಂತ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಮದ್ಯಪ್ರಿಯರು ಮದ್ಯ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದು, ಅಬಕಾರಿ ಇಲಾಖೆಯ ಹೊಸ ಆದೇಶದಿಂದ ಇನ್ನಷ್ಟು ತೊಂದರೆ ಎದುರಿಸಲಿದ್ದಾರೆ.

Also Read  ಶ್ರೀ ಕ್ಷೇತ್ರ ಶಿರಸಿ ಮಾರಿಕಾಂಬಾದೇವಿ ತಾಯಿಯ ಕೃಪೆಯಿಂದ ಈ ಹೊಸ ವರ್ಷದ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

 

error: Content is protected !!
Scroll to Top