ವಿದೇಶದಿಂದ ಆಗಮಿಸಿ ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯ ತಿರುಗಾಟ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ.01. ವಿದೇಶದಿಂದ ಆಗಮಿಸಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ಇರದೇ ಹೊರಗಡೆ ತೆರಳಿದ ವಿಚಾರ ಕೊರೊನಾ ನಿಗ್ರಹ ದಳದ ಸಿಬ್ಬಂದಿಗಳು ಆಗಮಿಸಿದ ವೇಳೆ ಗಮನಕ್ಕೆ ಬಂದಿದ್ದು, ಈ ಬಗ್ಗೆ ಹೋಂ ಕ್ವಾರಂಟೈನ್ ನಲ್ಲಿ ಇರದೆ ಇದ್ದ ವ್ಯಕ್ತಿಯ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವ್ಯಕ್ತಿಯೋರ್ವರು ಕೆಲದಿನಗಳ ಹಿಂದೆ ವಿದೇಶದಿಂದ ಆಗಮಿಸಿದ್ದು,14 ದಿನಗಳ ಕಾಲ‌ ಹೋಂ ಕ್ವಾರಂಟೈನ್ ನಲ್ಲಿರುವಂತೆ ಅವರಿಗೆ ಸೂಚಿಸಲಾಗಿತ್ತು. ಮಾರ್ಚ್ 30ರಂದು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಗ್ರಾ.ಪಂ.ನ ತಂಡ ಭೇಟಿ ನೀಡಿದ ವೇಳೆ ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಮನೆಯಿಂದ ಹೊರ ಹೋಗಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಮನೆಗೆ ಕರೆಸಿದ ಅಧಿಕಾರಿಗಳ ಜೊತೆ ಆ ವ್ಯಕ್ತಿಯು ಉಡಾಫೆಯಿಂದ ವರ್ತಿಸಿದ್ದಾರೆ ಎನ್ನಲಾಗಿದ್ದು, ಸರಕಾರದ ಸೂಚನೆಯನ್ನು ಪಾಲಿಸದೆ ಇದ್ದುದಕ್ಕೆ ವಿದೇಶದಿಂದ ಆಗಮಿಸಿದ ವ್ಯಕ್ತಿಯ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

error: Content is protected !!
Scroll to Top