ದೆಹಲಿಯ ನಡೆದ ಧಾರ್ಮಿಕ ಸಭೆಯಲ್ಲಿ ಉಪ್ಪಿನಂಗಡಿಯ ವ್ಯಕ್ತಿ ಭಾಗಿ ➤ ವೆನ್ಲಾಕ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.01. ದೆಹಲಿಯ ನಿಝಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿಯೋರ್ವರು ಭಾಗವಹಿಸಿದ್ದಾರೆ ಎಂಬ ಶಂಕೆಯಿಂದ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಆ ವ್ಯಕ್ತಿಯನ್ನು ಮಂಗಳೂರಿನ ವೆನ್‌ ಲಾಕ್‌ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ.

ದೆಹಲಿಯ ನಿಝಾಮುದ್ದೀನ್ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಹಲವರು ಈಗಾಗಲೇ ಕೊರೋನಾ ಪೀಡಿತರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ
ಉಪ್ಪಿನಂಗಡಿ ನಿವಾಸಿಯಾಗಿರುವ ವ್ಯಕ್ತಿಯು ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ವಿಚಾರ ತಿಳಿದ ಉಪ್ಪಿನಂಗಡಿ ಪೊಲೀಸರು ಅವರ ಮನೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಬಳಿಕ ವೆನ್ಲಾಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಉಪ್ಪಿನಂಗಡಿ ಪರಿಸರದಲ್ಲಿ ಈ ಬಗ್ಗೆ ಆತಂಕ ಸೃಷ್ಠಿಯಾಗಿದೆ.

Also Read  ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!

error: Content is protected !!
Scroll to Top