ಲಾಕ್‌ಡೌನ್ ಉಲ್ಲಂಘನೆ: 154 ವಾಹನ ಮುಟ್ಟುಗೋಲು

ಮಂಗಳೂರು, ಎ.2: ಮಂಗಳೂರು ಕಮಿಷನರೇಟ್ ವ್ಯಾಪ್ತಿ ಲಾಕ್ ಡೌನ್ ಘೋಷಣೆಯಾಗಿದ್ದರೂ ಅನವಶ್ಯಕವಾಗಿ ರಸ್ತೆಗಳಲ್ಲಿ ಸಂಚರಿಸುತ್ತಿದ್ದ 154 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಅನವಶ್ಯಕವಾಗಿ ಸಂಚಾರ ಮಾಡಿದರೆ ವಾಹನ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಪೊಲೀಸ್ ಆಯುಕ್ತ ಹರ್ಷ ಸಾರ್ವಜನಿಕರಿಗೆ ಈ ಹಿಂದೆಯೇ ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಆದರೂ ಬಹಳಷ್ಟು ಮಂದಿ ವಿನಾಕಾರಣ ಸಂಚರಿಸುವುದನ್ನು ಬಿಟ್ಟಿರಲಿಲ್ಲ. ಗುರುವಾರ ಅಂತಹ 154 ವಾಹನಗಳನ್ನು ಮುಟ್ಟುಗೋಲು ಹಾಕಿ ಖಡಕ್ ಸಂದೇಶ ರವಾನಿಸಲಾಗಿದೆ.

Also Read  ಸುಬ್ರಹ್ಮಣ್ಯ: ಅಪರಿಚಿತ ಶವ ಪತ್ತೆ ➤ ನದಿಯಲ್ಲಿ ತೇಲುತ್ತಿದ್ದ ಮೃತದೇಹ

error: Content is protected !!
Scroll to Top