ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣುಹಂಪಲು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ

  • ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಮಂಗಳೂರು, ಎ.2: ಸೆಂಟ್ರಲ್ ಮಾರ್ಕೆಟ್‌ನ ತರಕಾರಿ, ಹಣ್ಣು ವ್ಯಾಪಾರ ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರಿಸಿ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.

 

ಸೆಂಟ್ರಲ್‌ ಮಾರ್ಕೆಟ್‌ಗೆ ಚಿಲ್ಲರೆ ವ್ಯಾಪಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ತರಕಾರಿ ಹಾಗೂ ಹಣ್ಣಿನ ಅಂಗಡಿಗಳಲ್ಲಿ ಖರೀದಿ ಮಾಡಬೇಕಾಗಿದೆ.

ಬಂದರಿನಲ್ಲಿನ ದಿನಸಿ ವಸ್ತುಗಳ ಸಗಟು ವ್ಯಾಪಾರ ಎಂದಿನಂತೆ ಮುಂದುವರಿಯುತ್ತದೆ. ಸಗಟು ವ್ಯಾಪಾರಿಗಾರರು ಸಾರ್ವಜನಿಕರಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಬಂದರಿನಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಸಗಟು ವಾಹನಗಳ ಸಾಮಾನುಗಳನ್ನು ಇಳಿಸಲು ಮಾತ್ರ ಅವಕಾಶವಿದ್ದು ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಗಟು ಮಾರಾಟಗಾರರು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅವಕಾಶವಿದೆ.

Also Read  ಸವಣೂರು ಗ್ರಾ.ಪಂ. ವ್ಯಾಪ್ತಿಯನ್ನು ಕಡಬ ತಾಲೂಕಿಗೆ ಸೇರ್ಪಡೆ ವಿಚಾರ ► ಅಧಿಕಾರಿಗಳ ಜನವಿರೋಧಿ ನಿರ್ಧಾರದ ವಿರುದ್ಧ ಒಂದಾದ ಸವಣೂರು, ಪಾಲ್ತಾಡಿ, ಪುಣ್ಚಪಾಡಿಯ ಜನತೆ

ಇನ್ನು ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ದ್ವಿ ಚಕ್ರ ವಾಹನಗಳು ಹಾಗೂ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲು ಬಳಸುವ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಹಾಗೆಯೇ ಗುರುತಿನ ಚೀಟಿ ಹೊಂದಿರುವ ವೈದ್ಯಕೀಯ ಸಿಬ್ಬಂದಿಗಳು, ಮಾಧ್ಯಮದವರಿಗೆ ಸಂಚಾರಕ್ಕೆ ಅವಕಾಶವಿದೆ.

ವೈದ್ಯಕೀಯ ಸೇವೆಗಾಗಿ ಹಾಗೂ ಆಂಬುಲೆನ್ಸ್‌ಗಾಗಿ ಎಲ್ಲಾ ಸಾರ್ವಜನಿಕರು 108 ಅಥವಾ 1077 ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ. 108 ಆಂಬುಲೆನ್ಸ್‌ ಸೇವೆ ಲಭ್ಯವಿಲ್ಲದೆ ಇದ್ದ ಸಂದರ್ಭದಲ್ಲಿ ಮಾತ್ರ ಸಾರ್ವಜನರಿಕರು 1077 ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡಿದರೆ ಖಾಸಗಿ ವಾಹನಗಳಿಗೆ ವೈದ್ಯಕೀಯ ತುರ್ತು ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Also Read  ನಟಿ,ಬಿಜೆಪಿ ನಾಯಕಿ ಖುಷ್ಬೂ ಕಾರು ಅಪಘಾತ

 

error: Content is protected !!
Scroll to Top