ಉಳ್ಳಾಲ: ಲಕ್ಷಾಂತರ ರೂ. ಮೌಲ್ಯದ ಮದ್ಯ ಕಳವು

ಉಳ್ಳಾಲ, ಎ.3: ಇಲ್ಲಿನ ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 1 ಲಕ್ಷ ರೂ. ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಬೆಳಕಿಗೆ ಬಂದಿದೆ.

ಪುರುಷೋತ್ತಮ್ ಪಿಲಾರ್ ಎಂಬವರಿಗೆ ಸೇರಿದ ವೈನ್ಸ್ ಅಂಗಡಿಯಲ್ಲಿ ಕಳವು ನಡೆದಿದೆ. ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ.

ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ ಡಿವಿಆರ್ ನ್ನೂ ಕೂಡ ಕಳವು ನಡೆಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Also Read  ಕಮ್ಯೂನಿಟಿ ಡೆವಲಪ್‌ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ಆಸರೆ

 

error: Content is protected !!
Scroll to Top