ಲಾಕ್‌ಡೌ‌ನ್ ಎಫೆಕ್ಟ್: ಎಪ್ರಿಲ್ 30ರವರೆಗೂ ಬುಕ್ಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ

ಹೊಸದಿಲ್ಲಿ, ಎ.4: ಕೊರೋನ ನಿಗ್ರಹಕ್ಕೆ ಘೋಷಿಸಲಾಗಿದ್ದ ಎ.14ರವರೆಗಿನ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಇತ್ತೀಚೆಗೆ ನಿರ್ಬಂಧಿಸಲಾಗಿತ್ತು. ಆದರೆ, ಮಹತ್ವದ ಬೆಳವಣಿಗೆಯೊಂದರಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ತನ್ನ ದೇಶೀಯ ಮತ್ತು ಅಂತರಾಷ್ಟ್ರೀಯ ಹಾರಾಟಗಳಿಗೆ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ಏ.30ರವರೆಗೂ ವಿಸ್ತರಿಸಿದೆ.

ಇದು ಲಾಕ್ ಲೌನ್ ಅವಧಿಯ ಬಳಿಕವೂ ಮತ್ತೆ ಒಂದು ವಾರದ ಅವಧಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ದಿನಗಳ ಕಾಲ ಎಲ್ಲಾ ರೀತಿಯ ವಿಮಾನಯಾನ ಸೇವೆಗಳನ್ನು ನಿಷೇಧಿಸಬಹುದು ಎಂಬ ವದಂತಿಗಳು ಹರಡಲು ಆರಂಭವಾಗಿದೆ.

ಇಂಡಿಗೋ ವಕ್ತಾರರು ಮಾತನಾಡಿ, ಅಂತರಾಷ್ಟ್ರೀಯ ವಿಮಾನಗಳ ಬುಕಿಂಗ್ ಗಳನ್ನು ನಿಷೇಧಿಸಲಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿನ ವಾಣಿಜ್ಯ ವಿಮಾನಗಳನ್ನು ಎಪ್ರಿಲ್ 14ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಏರ್ ಇಂಡಿಯಾ ವಕ್ತಾರ ಮಾತನಾಡಿ, ಏಪ್ರಿಲ್ 3 ರಿಂದ ಎಪ್ರಿಲ್ 30 ರವರೆಗೂ ಎಲ್ಲಾ ವಿಮಾನ ಬುಕ್ಕಿಂಗ್ ಗಳನ್ನು ನಿಷೇಧಿಸಲಾಗಿದೆ. ಎಪ್ರಿಲ್ 14ರ ಬಳಿಕ ವಿಮಾನಯಾನ ಸಚಿವಾಲಯದ ನಿರ್ಧಾರದ ಕುರಿತು ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

Also Read  ಮೋದಿ ಸರಕಾರ ದೇಶದ ಯುವಜನತೆಯ ಮೇಲೆ ದಬ್ಬಾಳಿಕೆ ಮಾಡುತ್ತಿದೆ: ಪ್ರಿಯಾಂಕ ಗಾಂಧಿ ಆರೋಪ

error: Content is protected !!
Scroll to Top