ಎಸೆಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಬಳಿಕ 1 ವಾರ ತರಗತಿ: ಸಚಿವ ಸುರೇಶ್ ಕುಮಾರ್

ಚಾಮರಾಜನಗರ, ಎ.5: ಲಾಕ್‌ಡೌನ್ ಮುಗಿದ ಬಳಿಕ ಪರಿಸ್ಥಿತಿ ನೋಡಿಕೊಂಡು ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗುವುದು. ವೇಳಾಪಟ್ಟಿ ಪ್ರಕಟವಾದ ಬಳಿಕ ಒಂದು ವಾರ ಶಾಲೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್‌ನಿಂದಾಗಿ ಪರೀಕ್ಷೆ ಮುಂದೂಡಿ ದೀರ್ಘಕಾಲ ಅಭ್ಯಾಸ ರಜೆ ನೀಡಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಚೈತನ್ಯ ತುಂಬಬೇಕಿದೆ. ಪರೀಕ್ಷೆ ಬರೆಯುವ ಬಗ್ಗೆಯೂ ವಿದ್ಯಾರ್ಥಿಗಳಿಗೆ ಉತ್ಸಾಹ ಮೂಡಬೇಕಾಗಿದೆ. ಇದಕ್ಕಾಗಿ ಒಂದು ವಾರ ತರಗತಿ ನಡೆಸಿ ನಂತರ ಎಸೆಸೆಲ್ಸಿ ಪರೀಕ್ಷೆ ನಡೆಸಲಾಗುವುದು ಎಂದರು.

Also Read  ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು

error: Content is protected !!
Scroll to Top