ದ.ಕ. ಮೊದಲ ಕೊರೋನ ಸೋಂಕಿತ ಗುಣಮುಖ: ನಾಳೆ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು, ಎ.5: ದ.ಕ. ಜಿಲ್ಲೆಯಲ್ಲಿ ದಾಖಲಾಗಿದ್ದ ಮೊದಲ ಕೊರೋನ ಸೋಂಕಿತ ಗುಣಮುಖವಾಗಿದ್ದು, ಎ.6ರಂದು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ.

ಈ ಮೂಲಕ ಜಿಲ್ಲೆಯ ಜನತೆಯಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ. ದುಬೈನಿಂದ ಬಂದಿದ್ದ 22 ವರ್ಷದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೋನ ಸೋಂಕು ದೃಢಪಟ್ಟಿತ್ತು. ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆ ವ್ಯಕ್ತಿ ಮಂಗಳೂರಿಗೆ ಆಗಮಿಸಿದ್ದ.

ಮಾರ್ಚ್ 19ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೋನ ಸೋಂಕು ಲಕ್ಷಣಗಳು ಕಂಡುಬಂದಿತ್ತು. ತಕ್ಷಣ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Also Read  ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ' ➤ಡಿಸಿ

error: Content is protected !!
Scroll to Top