ಮರ್ಧಾಳ ಗ್ರಾ.ಪಂ. ಬಿಲ್ ಕಲೆಕ್ಟರ್ ವಾಮನ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಎ.06. ಇಲ್ಲಿನ ಮರ್ಧಾಳ ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಾಮನ ನಾಯ್ಕ್(50) ಸೋಮವಾರದಂದು ನಿಧನರಾದರು.

ಭಾನುವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಮೂಲಕ ಅವರನ್ನು ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Scroll to Top