ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನಗರದ ಪೋರ್ಟಿಸ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದಾರೆ. ಸದ್ಯ ಅವರು ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಬುಲೆಟ್ ಪ್ರಕಾಶ್ ಅವರು ನಿಧನ ಹೊಂದಿದ್ದಾರೆ ಎಂದು ವದಂತಿ ಹರಡಿದ ಬೆನ್ನಲ್ಲೇ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದಿದೆ.

Also Read  ಪ.ಜಾ/ ಪ.ಪಂಗಡದ ಅರ್ಹ ಕ್ರೀಡಾಪಟುಗಳಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು ತಮ್ಮ ತೂಕವನ್ನೂ ಇಳಿಸಿಕೊಂಡಿದ್ದರು.
ದರ್ಶನ್ ಅಭಿನಯದ ಧ್ರುವ ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದ ಬುಲೆಟ್ ಪ್ರಕಾಶ್ ನಂತರ ಕಲಾಸಿಪಾಳ್ಯ, ಐತಲಕ್ಕಡಿ, ಪಾರ್ಥ, ಜಾಕಿ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

error: Content is protected !!
Scroll to Top