ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ



ಮೈಸೂರು, ಎ.6: ರಾಜ್ಯದಲ್ಲಿ ಸೋಮವಾರ ಹೊಸದಾಗಿ 12 ಮಂದಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 163ಕ್ಕೇರಿದೆ.





ಈ ಪೈಕಿ ಮೈಸೂರು ಜಿಲ್ಲೆಯಲ್ಲಿ 7 ಸೋಂಕಿತರು ಪತ್ತೆಯಾಗಿದ್ದರೆ, ಬಾಗಲಕೋಟೆಯಲ್ಲಿ ಇಬ್ಬರಿಗೆ ಕೊರೋನ ಪಾಸಿಟಿವ್ ಆಗಿದೆ. ಹಾಗೆಯೇ ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಹಾಗೂ ಕೇರಳ ಮೂಲದ ತಲಾ ಒಬ್ಬರಲ್ಲಿ ಕೊರೋನ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ163ಕ್ಕೆ ಏರಿದೆ.






error: Content is protected !!
Scroll to Top