breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು.

ಅವರಿಗೆ 44 ವರ್ಷ ವಯಸ್ಸಾಗಿತ್ತು. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂಧಿಸದೆ ಅವರು ಸೋಮವಾರ ಸಂಜೆ ನಿಧರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದರು.

ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು ತಮ್ಮ ತೂಕವನ್ನೂ ಇಳಿಸಿಕೊಂಡಿದ್ದರು.
ದರ್ಶನ್ ಅಭಿನಯದ ಧ್ರುವ ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದ ಬುಲೆಟ್ ಪ್ರಕಾಶ್ ನಂತರ ಕಲಾಸಿ ಪಾಳ್ಯ, ಐತಲಕ್ಕಡಿ, ಪಾರ್ಥ, ಜಾಕಿ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

Also Read  'ಮುಷ್ಕರ' ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

error: Content is protected !!
Scroll to Top