ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ

  • ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ

ಮಂಗಳೂರು, ಎ.9: ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ. ಸುಮಾರು 50 ವರ್ಷಗಳ ಇತಿಹಾಸವಿರುವ ಈ ಮಾರುಕಟ್ಟೆಯನ್ನು ತೆರವು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.

ಜೊತೆಗೆ ಪಕ್ಕದ ತರಕಾರಿ ಮತ್ತು ಮೀನು ಮಾರುಕಟ್ಟೆಯನ್ನು ಮುಚ್ಚಲು ನಿರ್ಧರಿಸಲಾಗಿದೆ. ಎರಡೂ ಕಟ್ಟಡಗಳು ತೀರ ಶಿಥಿಲಾವಸ್ಥೆಯಲ್ಲಿದ್ದು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಹಂತದಲ್ಲಿದೆ.

ಆದ್ದರಿಂದ ನೆಲಸಮಗೊಳಿಸಿ ಆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

Also Read  ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ

ಮಂಗಳೂರಿನಲ್ಲಿ ಲಾಕ್ ಡೌನ್ ಸಂದರ್ಭ ಕೊರೋನ ಸೋಂಕು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮವಿದೆ.

ಆದರೆ ಈ ಮಾರುಕಟ್ಟೆಯಲ್ಲಿ ಕೊರೋನ ಸೋಂಕು ತಡೆಗಟ್ಟಲು ಸಾದ್ಯವಾಗದ ಕಾರಣ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ವ್ಯಾಪಾರಿಗಳಿಗೆ ಬೈಕಂಪಾಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಲಾಗಿತ್ತು.

error: Content is protected !!
Scroll to Top