ಎ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ಹೊಸದಿಲ್ಲಿ, ಎ.9: ಕೊರೋನ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 21 ದಿನಗಳ ಲಾಕ್ ಡೌನ್ ಎಪ್ರಿಲ್ 14ರಂದು ಅಂತ್ಯಗೊಳ್ಳಲಿದೆ. ಏತನ್ಮಧ್ಯೆ ದೇಶಾದ್ಯಂತ ಲಾಕ್ ಡೌನ್ ಮುಂದುವರಿಯಲಿದೆಯೇ ಎಂಬ ಜಿಜ್ಞಾಸೆ ಮೂಡಿದೆ. ಮತ್ತೊಂದೆಡೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಎಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರಿಸುವಂತೆ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಾಜ್ಯಗಳ ಮುಖ್ಯಮಂತ್ರಿ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಚರ್ಚೆ ನಡೆಸಿದ್ದಾರೆ. ಶನಿವಾರ ನಡೆಯಲಿರುವ ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಲಾಕ್ ಡೌನ್ ಗೆ ಸಂಬಂಧಿಸಿದ ಅನುಮಾನಕ್ಕೆ ಉತ್ತರ ದೊರೆಯಲಿದೆ.

Also Read  ರಷ್ಯಾ ಪ್ರವಾಸದ ನಂತರ ದೆಹಲಿಗೆ ಮರಳಿದ ಪ್ರಧಾನಿ ಮೋದಿ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ 15 ಪ್ರಮುಖ ಹಾಟ್ ಸ್ಪಾಟ್ ಗಳನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿದ್ದು, ಕೋವಿಡ್ 19 ವೈರಸ್ ತಡೆಯಲು ಎಲ್ಲರೂ ಕೈಜೋಡಿಸಬೇಕೆಂದು ಸೂಚಿಸಿದ್ದಾರೆ.

error: Content is protected !!
Scroll to Top