ದೇಶದಲ್ಲಿ ಕೊರೋನ ವೈರಸ್‌ಗೆ 199 ಮಂದಿ ಬಲಿ: 6,500 ಗಡಿಯತ್ತ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.10: ದೇಶದಲ್ಲಿ ಕೊರೋನ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಕಳೆದ 24 ಗಂಟೆಗಳಲ್ಲಿ 33 ಮಂದಿ ವೈರಸ್‌ಗೆ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 6,500 ಗಡಿಯತ್ತ ತಲುಪಿದೆ.

ಕೊರೋನ ವೈರಸ್ ಹತ್ತಿಕ್ಕಲು ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಿದೆ. ಆದರೂ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದು, ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 678 ಹೊಸ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 5,709 ಪ್ರಕರಣಗಳು ಇನ್ನೂ ಆಕ್ಟೀವ್ ಆಗಿದ್ದು, 503 ಜನ ಮಾತ್ರ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Also Read  'ಹರ್ ಘರ್ ತಿರಂಗಾ' ಅಭಿಯಾನ            ಜನತೆಗೆ ಪ್ರಧಾನಿ ಮೋದಿ ಕರೆ         

ದೇಶದಲ್ಲಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೇಂದ್ರ ಸರ್ಕಾರ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

error: Content is protected !!
Scroll to Top