ಪಡುಕೋಣೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಆರೋಪ: ಫಾದರ್ ಸೇರಿ ಆರು ಜನರ ಮೇಲೆ ದೂರು

ಕುಂದಾಪುರ, ಎ.10: ಕೊರೋನ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶ ಮಾಡಲಾಗಿತ್ತು. ಇದೀಗ ಆದೇಶ ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ನಾಡ ಗ್ರಾಮದ ಪಡುಕೋಣೆ ಸಂತ ಅಂತೋನಿ ಚರ್ಚ್‌ನಲ್ಲಿ ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಇದೀಗ ಪೊಲೀಸರು ಸ್ಥಳಕ್ಕೆ ಹೋಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫಾದರ್ ಫ್ರೆಡ್ ಮಸ್ಕರಿಯನ್ಸ್ ಹಾಗೂ ಇತರ 6 ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು ಸಿ.ಆರ್.ಪಿ.ಸಿ ಕಲಂ 144(3) ಉಲ್ಲಂಘನೆ ಮಾಡಿರುವುದು ದೃಢಪಟ್ಟಿದ್ದು ಪೊಲೀಸರು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, 269 ಜೊತೆಗೆ 149 ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Also Read  ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ‘ಡಿ’ ಗ್ರೂಪ್ ನೌಕರರಿಂದ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿರವರಿಗೆ ಬೀಳ್ಕೊಡುವ ಸಮಾರಂಭ

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರಿಂದ ಬೈಂದೂರು ತಹಶಿಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಸಪ್ಪ ಪಿ. ಪೂಜಾರಿ ಅವರು ನೀಡಿದ ದೂರಿನಂತೆ ಸಂತ ಅಂತೋನಿ ಚರ್ಚ್ ಪಾದರ್ ಫ್ರೆಡ್ ಮಸ್ಕರಿಯನ್ ಹಾಗೂ ಇತರ 6 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆಯೆಂದು ತಿಳಿದು ಬಂದಿದೆ.

Also Read  ಹಸಿರು ಪಟಾಕಿ ಬಳಕೆಗೆ ಸೂಚನೆ

error: Content is protected !!
Scroll to Top