ದೇಶದಲ್ಲಿ 24 ಗಂಟೆಗಳಲ್ಲಿ 1,035 ಮಂದಿಯಲ್ಲಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 7,447ಕ್ಕೆ ಏರಿಕೆ

ಹೊಸದಿಲ್ಲಿ, ಎ11: ದೇಶದಲ್ಲಿ ಮಾರಕ ಕೊರೋನ ವೈರಸ್ ಆತಂಕ ತಂದೊಡ್ಡಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಅಗತ್ಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,035 ಮಂದಿಯಲ್ಲಿ ಹೊಸದಾಗಿ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕು ಪೀಡಿತರ ಸಂಖ್ಯೆ 7,447ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1035 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 40 ಮಂದಿ ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.

ಈ ಹಿಂದಿನ ದಿನಗಳಿಗೆ ಹೋಲಿಸಿದರೆ 24 ಗಂಟೆಗಳಲ್ಲಿ ಅತಿಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ ಎಂದು ತಿಳಿಸಿದೆ. ಇನ್ನು 7447 ಮಂದಿ ಸೋಂಕಿತರ ಪೈಕಿ 6565 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 643 ಮಂದಿ ಕೊರೊನಾಗೆ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಈವರೆಗೆ ಮಾರಕ ಸೋಂಕಿಗೆ 239 ಮಂದಿ ಬಲಿಯಾಗಿದ್ದಾರೆ.

Also Read  ಸ್ನಾನಕ್ಕೆಂದು ನದಿಗಿಳಿದಿದ್ದ ವೇಳೆ ಆಯ ತಪ್ಪಿ ಮುಳುಗಡೆ ➤ ಪಿಯುಸಿ ವಿದ್ಯಾರ್ಥಿಗಳಿಬ್ಬರು ಮೃತ್ಯು

error: Content is protected !!
Scroll to Top