(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.18. ಲಾಕ್‌ಡೌನ್ ಸಡಿಲಿಕೆ ಖುಷಿಯಲ್ಲಿದ್ದವರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್ ಬಂದಿದ್ದು, ಲಾಕ್ ಡೌನ್ ಸಡಿಲಿಕೆ ನಿರ್ಧಾರವನ್ನು ಸರಕಾರವು ವಾಪಾಸ್ ಪಡೆದುಕೊಂಡಿದೆ.
ಕಂಟೇನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ವಾಪಾಸ್ ಪಡೆದುಕೊಂಡಿದೆ. ಎಪ್ರಿಲ್ 20ರಿಂದ ಯಥಾಸ್ಥಿತಿ ಮುಂದುವರೆಯಲಿದ್ದು, ಸಂಪೂರ್ಣ ಲಾಕ್‌ಡೌನ್ ಇರಲಿದೆ. ಅಗತ್ಯ ವಸ್ತುಗಳಿಗೆ (ಮೆಡಿಕಲ್ ಎಮರ್ಜೆನ್ಸಿ) ಮಾತ್ರ ಸರ್ಕಾರ ಅವಕಾಶ ನೀಡಿದೆ.