(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಗ್ರಾಮಗಳನ್ನು ಕಂಟೈನ್ ಮೆಂಟ್ ಝೋನ್ ಆಗಿ ಗುರುತಿಸಿ ಸರ್ಕಾರದ ಸೂಚನೆಯಂತೆ ಇನ್ಸಿಡೆಂಟ್ ಕಮಾಂಡರ್ ಗಳ ನೇಮಕಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅದೇಶಿಸಿದ್ದಾರೆ.
ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ, ತುಂಬೆ ಗ್ರಾಮ, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮ ಪುತ್ತೂರು ತಾಲೂಕಿನ ಸಂಪ್ಯ, ಉಪ್ಪಿನಂಗಡಿ ಗ್ರಾಮ, ಸುಳ್ಯ ತಾಲೂಕಿನ ಅಜ್ಜಾವರ, ಮಂಗಳೂರಿನ ತಾಲೂಕಿನ ತೊಕ್ಕೊಟ್ಟು ಗ್ರಾಮಗಳಲ್ಲಿ ಸರ್ಕಾರದ ನಿರ್ದೇಶನದಂತೆ ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸಂಪೂರ್ಣ ನಿರ್ಬಂಧ ಹೊರಡಿಸಲಾಗಿದೆ. ಈ ಪ್ರದೇಶದಲ್ಲಿ ಆರೋಗ್ಯ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಮಾತ್ರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.