ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ಭೀಕರ ಮಳೆಯಿಂದಾಗಿ ತತ್ತರಿಸಿರುವ ಮುಂಬೈ ಜನತೆ ನೆರೆಯ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಆಘಾತಕ್ಕೆ ಸಿದ್ಧವಾಗಬೇಕಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈಗಾಗಲೆ ಆಸ್ಸಾಂ, ಬಿಹಾರ ರಾಜ್ಯಗಳು ಪ್ರವಾಹಕ್ಕೀಡಾಗಿದ್ದು, ಮಂಗಳವಾರದ ಮಳೆಗೆ ಮಹಾರಾಷ್ಟ್ರದಲ್ಲೂ ನೆರೆ ನೀರಿನಿಂದ ಜನತೆ ತತ್ತರಿಸಿದ್ದಾರೆ. ಪರಿಸ್ಥಿತಿ ಹೀಗಿದ್ದು 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವಿಪರೀತ ಮಳೆಯಾಗಲಿದ್ದು, 14 ನದಿಗಳು ಮತ್ತು ಇತರ ಉಪನದಿಗಳು ಉಕ್ಕಿ ಹರಿಯುವ ಸಾಧ್ಯತೆಯು ದಟ್ಟವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

Also Read  ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ

error: Content is protected !!
Scroll to Top