ಮಂಗಳೂರಿನಲ್ಲಿ ಶಂಕಿತ ಕೊರೋನಾಗೆ ಮೊದಲ‌ ಬಲಿ ➤ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.19. ಶಂಕಿತ ಕೊರೋನ ವೈರಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 45 ವರ್ಷ ಪ್ರಾಯದ ಮಹಿಳೆಯೊಬ್ಬರು ರವಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆಯನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಗೆ ದಾಖಲಿಸಲಾಗಿತ್ತು. ಅವರ ಗಂಟಲಿನ ದ್ರವವನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿದ್ದು, ಈ ಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Also Read  ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

error: Content is protected !!
Scroll to Top