breaking news ದ.ಕ. ಇಬ್ಬರು ಸೇರಿ ರಾಜ್ಯದಲ್ಲಿ ರವಿವಾರ 6 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆ

ಬೆಂಗಳೂರು, ಎ.19: ರಾಜ್ಯದಾದ್ಯಂತ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಶನಿವಾರ 5ರಿಂದ ರವಿವಾರ 5 ರವರೆಗೆ ರಾಜ್ಯದಲ್ಲಿ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವರೆಗೆ ಕೊರೋನದಿಂದಾಗಿ 16 ಜನರು ಮೃತಪಟ್ಟಿದ್ದು, 111 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್-19 ಪೀಡಿತ 263 ವ್ಯಕ್ತಿಗಳಲ್ಲಿ 260 ರೋಗಿಗಳು (ಒಬ್ಬರು ಗರ್ಭಿಣಿ (ಪ್ರಕರಣ-176 ಸೇರಿದಂತೆ) ನಿಗದಿಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್‌ಗಳಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಆರೋಗ್ಯ ಸ್ಥಿರವಾಗಿದ್ದು, ಮೂವರನ್ನು ಐಸಿಯುನಲ್ಲಿ ಇಡಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.

Also Read  ?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ

ಮೈಸೂರಿನ ನಾಲ್ವರು ಹಾಗೂ ದ.ಕ. ಇಬ್ಬರಿಗೆ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಈ ಪೈಕಿ ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಓರ್ವ ಸೋಂಕಿತ ಮಹಿಳೆ ಮೃತಪಟ್ಟಿದ್ದಾರೆ.

error: Content is protected !!
Scroll to Top