(ನ್ಯೂಸ್ ಕಡಬ) newskadaba.com ಮಂಗಳೂರು, ಎ.19. ಈಗಾಗಲೇ ಮಹಾಮಾರಿ ಕೊರೊನ ಖಾಯಿಲೆಗೆ ಬಂಟ್ವಾಳ ಮೂಲದ ಮಹಿಳೆಯೋರ್ವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೆಲವರು ಮಹಿಳೆಯ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ಈ ರೀತಿ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿದು ಬಂದಿರುತ್ತದೆ. ಈಗಾಗಲೇ ಇಲಾಖೆಯು ಮಹಿಳೆಯ ಭಾವಚಿತ್ರ ಹರಡುತ್ತಿರುವವರ ಮಾಹಿತಿ ಕಲೆ ಹಾಕುತ್ತಿದ್ದು, ಸದ್ಯ ಅಂಥವರನ್ನು ಕಾನೂನಿನ ಅಡಿಯಲ್ಲಿ ಒಳಪಡಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ಆದ್ದರಿಂದ ಕೂಡಲೇ ಮಹಿಳೆಯ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿದರೆ ಒಳ್ಳೆಯದು. ಇಲ್ಲವಾದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.