ಕಡಬ: ಮನೆಯ ಅಟ್ಟದಿಂದ ಕೆಳಕ್ಕೆ ಬಿದ್ದು ಯುವಕ ಗಂಭೀರ ➤ ಪುತ್ತೂರಿನ ಆಸ್ಪತ್ರೆಗೆ ದಾಖಲು



(ನ್ಯೂಸ್ ಕಡಬ) newskadaba.com ಕಡಬ, ಎ.19. ಮನೆಯ ಅಟ್ಟದಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಕಡಬದಲ್ಲಿ ನಡೆದಿದೆ.





ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ನಾಕೂರು ನಿವಾಸಿ ಹಂಝ ಎಂಬವರ ಪುತ್ರ ಪೈಝಲ್(26) ಎಂಬಾತ ತನ್ನ ಮನೆಯ ಅಟ್ಟದಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಕಡಬದ 108 ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top