ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ➤ ವೈದ್ಯಕೀಯ ಶಿಷ್ಟಾಚಾರದಂತೆ ಸರಕಾರಿ ನೇತೃತ್ವ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.19. ಕೊರೋನದಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ಅಂತ್ಯ ಸಂಸ್ಕಾರವನ್ನು ಭಾನುವಾರ ರಾತ್ರಿ ಮಂಗಳೂರಿನ ಬೋಳೂರು ಶವಾಗಾರದಲ್ಲಿ ನಡೆಸಲಾಯಿತು.

ಸರ್ಕಾರಿ ನೇತೃತ್ವದಲ್ಲಿ ವೈದ್ಯಕೀಯ ಶಿಷ್ಟಾಚಾರದಂತೆ ಅಂತ್ಯ ಸಂಸ್ಕಾರ ನಡೆಸಲಾಗಿದ್ದು, ಪತಿ ಮತ್ತು ಮಗನಿಗೆ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೆಲ ಬೆರಳೆಣಿಕೆಯ ಸಂಬಂಧಿಕರು ಮಾತ್ರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು.

Scroll to Top