ಬೆಂಗಳೂರು, ಎ.20: ರಾಜ್ಯದಲ್ಲಿ ಮಾರಕ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನತೆ ತಲ್ಲಣಗೊಂಡಿದ್ದಾರೆ. ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಮತ್ತಷ್ಟು ಆತಂಕ ತಂದೊಡ್ಡಿದೆ. ಏತನ್ಮಧ್ಯೆ, ರಾಜ್ಯದಲ್ಲಿ ಮತ್ತೆ ಐವರಲ್ಲಿ ಕೊರೋನ ಸೋಂಕು ಪಾಸಿಟಿವ್ ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಳಗ್ಗೆಯವರೆಗೆ ಮತ್ತೆ ಐವರಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಈ ಐದು ಪ್ರಕರಣಗಳು ಕಲಬುರಗಿ ಜಿಲ್ಲೆಯದ್ದೇ ಆಗಿದೆ. ಈ ಸೋಂಕಿತರು ಈಗಾಗಲೇ ಸೋಂಕು ಪೀಡಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರೇ ಆಗಿದ್ದಾರೆ.