Breaking news ಕಲಬುರಗಿಯಲ್ಲಿ ಕೊರೋನ ಸೋಂಕಿಗೆ 4 ನೇ ಬಲಿ: 80 ವರ್ಷದ ವೃದ್ಧ ಮೃತ್ಯು

  • ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆ

ಕಲಬುರಗಿ, ಎ.21: ಕೊರೋನ ಸೋಂಕಿಗೆ ಜಿಲ್ಲೆಯ 80 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದರಿಂದ ಮೃತಪಟ್ಟವರ ಸಂಖ್ಯೆ ‌ನಾಲ್ಕಕ್ಕೇರಿದಂತಾಗಿದೆ. ಒಟ್ಟು ರಾಜ್ಯದಲ್ಲಿ ಕೊರೋನದಿಂದ 17 ಮಂದಿ ಸಾವನ್ನಪ್ಪಿದ್ದಾರೆ.

ಮೂರು ವರ್ಷಗಳಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧನಿಗೆ ಜ್ವರ ‌ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ಅವರ ವರದಿ ಬಂದಿದ್ದು, ಕೋವಿಡ್ 19 ಪಾಸಿಟಿವ್ ಇರುವುದು ಗೊತ್ತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Scroll to Top