ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೊಳಪಡಿಸುವಂತೆ ಸಿಎಂ ಸೂಚನೆ

ಬೆಂಗಳೂರು, ಎ.21: ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್-19 ಪರೀಕ್ಷೆಗೊಳಪಡಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಂಬೈ ಪತ್ರಕರ್ತರಿಗೆ ಕೊರೊನಾ ತಗುಲಿರುವ ಘಟನೆ ಬಳಿಕ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಮಾಧ್ಯಮ ಸಿಬ್ಬಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಮುಂದಾಗಿದೆ.

ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದಲ್ಲೂ ಪತ್ರಕರ್ತರಿಗೆ ಕೋವಿಡ್-19 ಟೆಸ್ಟ್ ಮಾಡಿಸಲು ಸಚಿವ ಸುರೇಶ್ ಕುಮಾರ್ ಸಿಎಂ ಯಡಿಯೂರಪ್ಪಅವರಿಗೆ ಪತ್ರ ಬರೆದಿದ್ದು ಇದಕ್ಕೆ ಸ್ಪಂದಿಸಿದ ಸಿಎಂ, ವಾರ್ತಾ ಇಲಾಖೆ ಆಯುಕ್ತರು ತಕ್ಷಣ ಎಲ್ಲ ಪತ್ರಕರ್ತರಿಗಾಗಿ ಕೊರೋನ ತಪಾಸಣಾ ಶಿಬಿರ ಏರ್ಪಡಿಸುವಂತೆ ಸೂಚನೆ ನೀಡಿದ್ದಾರೆ.

Also Read  ಶೀಘ್ರದಲ್ಲಿ ಸುಸಜ್ಜಿತ ರಂಗ ಮಂದಿರ ನಿರ್ಮಾಣ ಕಾಮಗಾರಿ ➤ ಶಾಸಕ ಡಾ. ವೈ ಭರತ್ ಶೆಟ್ಟಿ

ಮಾಧ್ಯಮ ಸಿಬ್ಬಂದಿ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಹಗಲಿರುಳು ಸುದ್ದಿ ಬಿತ್ತರಿಸುವಲ್ಲಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಿಗಾಗಿಯೇ ಮಹಾರಾಷ್ಟ್ರ ಸರಕಾರದಿಂದ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಲ್ಲಿ 167ಕ್ಕೂ ಅಧಿಕ ಜನರನ್ನು ತಪಾಸಣೆಗೆ ಒಳಪಡಿಸಿ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 53 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ರಾಜ್ಯ ಸರಕಾರ ಪತ್ರಕರ್ತರನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲು ವಾರ್ತಾ ಮತ್ತು ಪ್ರಸಾರ ಇಲಾಖೆಗೆ ನಿರ್ದೇಶಿಸಿದೆ.

error: Content is protected !!
Scroll to Top