ಬೆಂಗಳೂರು, ಎ.21: ರಾಜ್ಯದಲ್ಲಿ ಇಂದು ಕೂಡ ಕೊರೋನ ಸೋಂಕಿನ ಪ್ರಕರಗಳು ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 10 ಕೊರೋನ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು 2,773 ಜನರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 2,725 ಕೋರೋನಾ ನೆಗೆಟಿವ್ ಆಗಿದೆ. ಇವರಲ್ಲಿ 10 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿರುವುದಾಗಿ ತಿಳಿಸಿದರು. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದ್ದಾರೆ.
ಅಂದಹಾಗೇ ಇಂದು 3 ಕಲಬುರಗಿ, 3 ವಿಜಯಪುರ, 2 ಮೈಸೂರು, 1 ಬೆಳಗಾವಿ ಮತ್ತು ದಕ್ಷಿಣ ಕನ್ನಡ ಒಬ್ಬರಿಗೆ ಕೊರೋನ ಸೋಂಕು ಪತ್ತೆಯಾಗಿದೆ.
ಹೀಗಾಗಿ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 418ಕ್ಕೆ ಏರಿಕೆಯಾಗಿದೆ. ಇಂದು ಕೊರೋನ ಸೋಂಕಿತರಾಗಿದ್ದಂತ 17 ಜನರು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 17 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 129 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದರು.