ನಿಯಂತ್ರಣ ತಪ್ಪಿದ ಲಾರಿ ಬಸ್ಸಿಗೆ ಢಿಕ್ಕಿ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31. ಖಾಸಗಿ ಬಸ್ ಹಾಗು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ನೈಸ್ ರಸ್ತೆಯಲ್ಲಿ ಬುಧವಾರ ಸಂಭವಿಸಿದೆ.

ಹೈದರಾಬಾದ್ ಮೂಲದ ಶೇಖರ್ (24), ಅನಿತಾ (26) ಮೃತ ದುರ್ದೈವಿಗಳು. ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್ಸಿಗೆ ಲಾರಿ ನೇರವಾಗಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top