ಬೆಂಗಳೂರು, ಎ.24: ರಾಜ್ಯದಲ್ಲಿ ಹೊಸದಾಗಿ 29 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿಒಟ್ಟು ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು 19, ಚಿಕ್ಕಬಳ್ಳಾಪುರ 1, ತುಮಕೂರು 1, ಬೆಳಗಾವಿ 2, ವಿಜಪುರ 2, ಬಾಗಲಕೋಟೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಇಲಾಖೆ ತಿಳಿಸಿದೆ.