ಪತ್ರಕರ್ತ ಸೇರಿ ರಾಜ್ಯದಲ್ಲಿ 15 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ

ಬೆಂಗಳೂರು, ಎ.25: ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಮಧ್ಯಾಹ್ನ 12ರವರೆಗೆ 15 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ 6, ಬೆಳಗಾವಿ 6, ಮಂಡ್ಯ 1, ಚಿಕ್ಕಬಳ್ಳಾಪುರ 1, ದ.ಕ. 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಬಿಬಿಎಂಪಿಯ ಕಂಟೈನ್ಮೆಂಟ್ ವಲಯಕ್ಕೆ ಭೇಟಿ ನೀಡಿದ ಪತ್ರಕರ್ತರೋರ್ವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಪ್ರಸ್ತುಕ ಸೋಂಕಿಗೊಳಗಾಗಿರುವ ಪತ್ರಕರ್ತ ಕರ್ತವ್ಯದ ಮೇರೆಗೆ ಸೂಕ್ಷ್ಮ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಇವರನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕಿನ ಲಕ್ಷಣಗಳು ಕಂಡುಬಂದಿದೆ ಎನ್ನಲಾಗಿದೆ.

Also Read  ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ಹೆಚ್ಚಾಗಲಿದೆ ➤ ಪ್ರಧಾನಿ ಮೋದಿ

ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೇರಿಕೆಯಾಗಿದೆ. 18 ಜನರು ಮೃತಪಟ್ಟಿದ್ದು, 153 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟನೆ ತಿಳಿಸಿದೆ.

error: Content is protected !!
Scroll to Top