ರಾಜ್ಯದಲ್ಲಿ ಇಂದು ಮೂವರಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಎ.26: ರಾಜ್ಯದಲ್ಲಿ ರವಿವಾರ ಹೊಸದಾಗಿ ಮೂವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕೊರೋನ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಓರ್ವ ಮಹಿಳೆ ಹಾಗೂ ಕಲಬುರಗಿಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ. 182 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

error: Content is protected !!
Scroll to Top