ದೇಶದಲ್ಲಿ ಒಂದೇ ದಿನ ಕೊರೋನ ಸೋಂಕಿಗೆ 48 ಮಂದಿ ಸಾವು: 1,396 ಹೊಸ ಪ್ರಕರಣ ಪತ್ತೆ

ಹೊಸದಿಲ್ಲಿ, ಎ.27: ಭಾರತದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,396 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. 48 ಮಂದಿ ಕೊರೋನಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 27,892 ಕ್ಕೆ ಏರಿಕೆಯಾಗಿದ್ದು, ಈವರೆಗೆ 872 ಮಂದಿ ಸಾವನ್ನಪ್ಪಿದ್ದಾರೆ. 6,185 ಜನರು ಗುಣಮುಖರಾಗಿದ್ದು, 20,835 ಜನರು ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ 8,068 ಜನರಿಗೆ ಸೋಂಕು ತಗುಲಿದ್ದು, 342 ಜನರು ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ 3,301 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 151 ಜನ ಮೃತಪಟ್ಟಿದ್ದಾರೆ. ದಿಲ್ಲಿಯಲ್ಲಿ ಸೋಂಕಿತರ ಸಂಖ್ಯೆ 2,918 ಪ್ರಕರಣಗಳ ಪೈಕಿ 54 ಮಂದಿ ಮೃತಪಟ್ಟಿದ್ದಾರೆ.

Also Read  ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ

error: Content is protected !!
Scroll to Top