ಹಸಿರು ವಲಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಷರತ್ತು ಬದ್ಧ ಆರ್ಥಿಕ ಚಟುವಟಿಕೆ ಅವಕಾಶ

ಬೆಂಗಳೂರು, ಎ.28: ರಾಜ್ಯದಲ್ಲಿ ಒಂದೂ ಕೊರೋನ ವೈರಸ್ ಪ್ರಕರಣಗಳಿಲ್ಲದ ಹಸಿರುವ ವಲಯದ ಜಿಲ್ಲೆಗಳಲ್ಲಿ ಷರತ್ತು ಬದ್ಧ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ ಮತ್ತು ಕೊಡಗು ಜಿಲ್ಲೆಗಳು ಹಸಿರು ವಲಯದ ವ್ಯಾಪ್ತಿಗೆ ಬರುತ್ತವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಸಿರು ವಲಯದ ಜಿಲ್ಲೆಗಳಲ್ಲಿ ಅಂಗಡಿಗಳು, ಪುರಸಭೆಯ ಮಿತಿಯಲ್ಲಿರುವ ವಸತಿ ಸಂಕೀರ್ಣಗಳಲ್ಲಿನ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ರಾಮನಗರವನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದ ಕೈಗಾರಿಕೆಗಳನ್ನು ಶೇ.50ರಷ್ಟು ಮಾನವಶಕ್ತಿಯೊಂದಿಗೆ ತೆರೆಯಲು ತಿಳಿಸಲಾಗಿದೆ. ಆದರೆ, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯಗೊಳಿಸಲಾಗಿದೆ.

Also Read  ನಿಮ್ಮ ಕೈ ನಲ್ಲೇ ಇದೆ ನಿಮ್ಮ ಭವಿಷ್ಯ! ನಿಮ್ಮ ಅದೃಷ್ಟ ತಿಳಿದುಕೊಳ್ಳಬೇಕೆ?

ಇನ್ನು ಕೆಂಪು ವಲಯದಲ್ಲಿ ಬರುವ ಜಿಲ್ಲೆಗಳಾದ ಬೆಂಗಳೂರು ನಗರ, ಬೆಳಗಾವಿ, ಮೈಸೂರು, ವಿಜಯಪುರ, ಬಾಗಲಕೋಟೆ, ಕಲುಬರಗಿ, ಬೀದರ್ ಮತ್ತು ದ.ಕ. ಜಿಲ್ಲೆಗಳಲ್ಲಿ ಲಾಕ್‌ಡೌನ್ ಎಂದಿನಂತೇ ಮುಂದುವರಿಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

error: Content is protected !!
Scroll to Top