ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ, ಎ.29: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ದೊಡ್ಡ ಕರುಳು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್‌ರನ್ನು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ನಟ ಇರ್ಫಾನ್ ಖಾನ್ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಇದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು.

Also Read  ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ

ಬಾಲಿವುಡ್‌ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್ ಸಿಂಗ್ ತೋಮರ್, ರೋಗ್. ಲೈಫ್ ಆಫ್ ಪೈ, ನೇಮ್ ಸೇಕ್, ಸೇರಿದಂತೆ ಹಲವು ಚಿತ್ರಗಳ ಮೂಲಕ ಇರ್ಫಾನ್ ಚಿತ್ರಪ್ರೇಮಿಗಳ ಮನಗೆದ್ದಿದ್ದರು.

error: Content is protected !!
Scroll to Top