ಬೆಂಗಳೂರು, ಎ.29: ರಾಜ್ಯದಲ್ಲಿ ಬುಧವಾರ 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಲಬುರಗಿಯಲ್ಲಿ 8, ಬೆಳಗಾವಿಯ ಹುಕ್ಕೇರಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 245 ಮಂದಿ ಗುಣಮುಖರಾಗಿದ್ದಾರೆ ಮತ್ತು ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.