ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಎ.30. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರದಂದು ನಿಧನರಾದರು.

ಈ ಕುರಿತು ಸ್ವತಃ ಅವರ ಸಹೋದರ ರಣಧೀರ್ ಕಪೂರ್ ಅಧಿಕೃತ ಮಾಹಿತಿಯನ್ನು ಹೊರ ಹಾಕಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರನ್ನು ಮುಂಬೈನ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿ ತಿಂಗಳಿನಲ್ಲಿ ರಿಷಿ ಕಪೂರ್ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Scroll to Top