ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

ಮುಂಬೈ, ಎ.30: ಬಾಲಿವುಡ್‌ನ ಹಿರಿಯ ನಟ ರಿಷಿ ಕಪೂರ್‌ (67)ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಉಸಿರಾಟದ ತೊಂದರೆ ಸಹ ಕಾಣಿಸಿಕೊಂಡ ಕಾರಣ ಬುಧವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಅವರು ಒಂದು ವರ್ಷಗಳ ಕಾಲ ಅಮೆರಿಕಾದಲ್ಲಿ ಕ್ಯಾನ್ಸರ್‌ಗಾಗಿ ಚಿಕಿತ್ಸೆ ಪಡೆದಿದ್ದು ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ವಾಪಾಸಾಗಿದ್ದರು. ಫೆಬ್ರವರಿ ತಿಂಗಳಲ್ಲಿ ಅನಾರೋಗ್ಯದಿಂದಾಗಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

 

Also Read  ಪವರ್ ಸ್ಟಾರ್ ನಿಧನದ ಬೆನ್ನಲ್ಲೇ ಫಿಲ್ಮ್ ಇಂಡಸ್ಟ್ರೀಗೆ ಮತ್ತೊಂದು ಆಘಾತ ➤ ಮತ್ತೋರ್ವ ಸೂಪರ್ ಸ್ಟಾರ್ ಆಸ್ಪತ್ರೆಗೆ ದಾಖಲು

 

error: Content is protected !!
Scroll to Top