ಕಡಬ: ಗಣಿ ಹಾಗೂ ಕಂದಾಯ ಅಧಿಕಾರಿಗಳಿಂದ ದಾಳಿ ➤ ಅಕ್ರಮವಾಗಿ ಶೇಖರಿಸಿಟ್ಟಿದ್ದ 40 ಲೋಡ್ ಮರಳು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ,‌ಮೇ.02. ಕಡಬ ತಾಲೂಕಿನ ಬಂಟ್ರ ಗ್ರಾಮದ ಅಳೇರಿಮಜಲು ಎಂಬಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ ಹಚ್ಚಿರುವ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಂದಾಯ ಅಧಿಕಾರಿಗಳು ಸುಮಾರು 40 ಲೋಡ್‌ ಮರಳನ್ನು ವಶಪಡಿಸಿಕೊಂಡಿದ್ದಾರೆ‌.

ಖಚಿತ ಮಾಹಿತಿಯ ಮೇರೆಗೆ ದಾಳಿ‌ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ವಸುಧಾ ಹಾಗೂ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ ಬಂಟ್ರ ಗ್ರಾಮದ ಸಜಿ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಸುಮಾರು 40 ಲೋಡ್ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿಯಲ್ಲಿ ಗ್ರಾಮ ಕರಣಿಕರಾದ ಹರೀಶ್ ಕುಮಾರ್, ಬಸವರಾಜ್, ಗ್ರಾಮ ಸಹಾಯಕರಾದ ಶಶಿಧರ್, ವಿನುತ್, ಉದಯಕುಮಾರ್ ಭಾಗವಹಿಸಿದ್ದರು.

Also Read  ಇಂದು ಕರೋಪಾಡಿ ಗ್ರಾ.ಪಂ. ಉಪಚುನಾವಣೆ

error: Content is protected !!
Scroll to Top