ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ನಿಸಾರ್ ಅಹಮದ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.03. ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರು ಭಾನುವಾರದಂದು ನಿಧನರಾದರು. ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆ ಮಾತಾಗಿದ್ದ ಅವರು ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ್ದರು. 2007 ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಸಾಹಿತಿ ಕೆ ಎಸ್ ನಿಸಾರ್ ಅಹಮದ್ ಅವರ ನಿಧನ ದುಃಖ ತಂದಿದೆ. ಅವರು ಪ್ರಾಧ್ಯಾಪಕರಾಗಿ, ಭೂ ವಿಜ್ಞಾನಿಯಾಗಿಯೂ ಸೇವೆ ಸಲ್ಲಿಸಿದ್ದರು. ಸಂವೇದನಾಶೀಲ ಲೇಖಕರಾಗಿ, ಜನಪ್ರಿಯ ಕವಿಯಾಗಿ ಅವರು ಗುರುತಿಸಿಕೊಂಡಿದ್ದರು.
ನಿಸಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು, ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Also Read  ಕೊಳೆತ ಮೊಟ್ಟೆ ಪೂರೈಕೆ..! - ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ

error: Content is protected !!
Scroll to Top