ಕಡಬ, ನೆಲ್ಯಾಡಿ ಪರಿಸರದಲ್ಲಿ ಗುಡುಗು ಮಿಶ್ರಿತ ಭಾರೀ ಗಾಳಿ ಮಳೆ ➤ ಸುಬ್ರಹ್ಮಣ್ಯದಲ್ಲಿ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಮೇ.05. ಮಂಗಳವಾರ ಸಂಜೆ ಕಡಬ ತಾಲೂಕಿನ ವಿವಿಧೆಡೆ ಗುಡುಗು, ಮಿಂಚಿನ ಆರ್ಭಟದೊಂದಿಗೆ ಭಾರೀ ಗಾಳಿ ಮಳೆಯಾಗಿದೆ.

ಕಡಬ, ಮರ್ಧಾಳ, ಬಿಳಿನೆಲೆ, ಪಂಜ, ನೆಲ್ಯಾಡಿ, ಇಚಿಲಂಪಾಡಿ, ‌ಆಲಂಕಾರು, ಆತೂರು ಪರಿಸರದಲ್ಲಿ ಭಾರೀ ಗಾಳಿ ಬೀಸಿದ್ದು, ಹಲವೆಡೆ ಹಾನಿಯಾಗಿರುವ ಸಂಭವವಿದೆ. ಹಾನಿಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸುಬ್ರಹ್ಮಣ್ಯದಲ್ಲಿ ಗುಡುಗು ಮಿಶ್ರಿತ ಮಳೆಯಾಗಿದ್ದು ಗಾಳಿಯ ರಭಸವು ಕಡಿಮೆಯಾಗಿತ್ತು.

Scroll to Top