‘ಕೊರೋನಾ ವಾರಿಯರ್ಸ್‌’ ತಂಡವನ್ನು ಗೌರವಿಸಿದ ಚಂದ್ರಶೇಖರ ಸ್ವಾಮೀಜಿ ದಂಪತಿ ➤ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಗೌರವ

(ನ್ಯೂಸ್ ಕಡಬ) newskadaba.com ಕಡಬ, ಮೇ.07. ಕೊರೋನಾ ಹಿನ್ನೆಲೆಯಲ್ಲಿ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೊರೋನಾ ವಾರಿಯರ್ಸ್ ತಂಡವನ್ನು ಬೆಂಗಳೂರಿನ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು.

ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ಹಾಗೂ ಕಡಬ ಠಾಣೆಯ ಪೊಲೀಸರು, ಗೃಹರಕ್ಷಕ ದಳದ ಸಿಬ್ಬಂದಿಗಳು, ವೈದ್ಯಾಧಿಕಾರಿಗಳು, ದಾದಿಯರನ್ನು ಬೆಂಗಳೂರಿನ ಆರ್‌.ಟಿ. ನಗರದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಮುಖ್ಯಸ್ಥರಾದ ಚಂದ್ರಶೇಖರ ಸ್ವಾಮೀಜಿ ದಂಪತಿ ಹಾರ ಹಾಕಿ ಗೌರವಿಸಿ ಧೈರ್ಯ ತುಂಬಿದರು.

Also Read  ? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ

error: Content is protected !!
Scroll to Top