ಮಂಗಳೂರು, ಮೇ 8: ಉತ್ತರ ಭಾರತದ ಸುಮಾರು 700ಕ್ಕೂ ಅಧಿಕ ವಲಸೆ ಕಾರ್ಮಿಕರು ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಜಮಾಯಿಸಿದ್ದು, ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುವಂತಾಗಿದೆ.
ಕಾರ್ಮಿಕರನ್ನು ಉಚಿತವಾಗಿ ರೈಲಿನ ಮೂಲಕ ಕಳುಹಿಸಲಾಗುತ್ತಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪರಿಣಾಮ ಸುಳ್ಳು ಸುದ್ದಿ ನಂಬಿಯನ್ನು ಕೂಳೂರು, ಸುರತ್ಕಲ್, ಬೈಕಂಪಾಡಿಯಿಂದ ಬಂದಿರುವ ಸುಮಾರು 700ಕ್ಕೂ ಹೆಚ್ಚು ಕಾರ್ಮಿಕರು ಕಾಲ್ನಾಡಿಗೆ ಮೂಲಕ ರೈಲು ನಿಲ್ದಾಣಕ್ಕೆ ಆಗಮಿಸಿ ತಮ್ಮೂರಾದ ರಾಜಸ್ಥಾನ, ಬಿಹಾರ, ಅಸ್ಸಾಂ, ಉತ್ತರಪ್ರದೇಶಗಳಿಗೆ ಕಳುಹಿಸುವಂತೆ ಪಟ್ಟು ಹಿಡಿದಿದ್ದಾರೆ.
ಇವರನ್ನು ನಿಯಂತ್ರಿಸಲು ರೈಲ್ವೆ ಪೊಲೀಸರು ಹಾಗೂ ಪಾಂಡೇಶ್ವರ ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. ಈ ವೇಳೆ ಕಾರ್ಮಿಕರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಕೆಲಸವೂ ಇಲ್ಲ, ಆದಾಯವೂ ಇಲ್ಲ, ನಮ್ಮನ್ನು ಊರಿಗೆ ಕಳುಹಿಸಿಕೊಡಿ. ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.