ರಾಜ್ಯದಲ್ಲಿ ಒಂದೇ ದಿನದಲ್ಲಿ 41 ಮಂದಿಗೆ ಕೊರೋನಾ ಸೋಂಕು ದೃಢ ➤ ಒಟ್ಟು ಸೋಂಕಿತರ ಸಂಖ್ಯೆ 794 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.09. ರಾಜ್ಯದಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಒಂದೇ ಒಟ್ಟು 41 ಮಂದಿಯಲ್ಲಿ ಕೊರೋನ ವೈರಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 41 ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆಯ ಹೆಲ್ತ್ ಬಲೆಟಿನ್ ತಿಳಿಸಿದೆ. ಬೆಂಗಳೂರು ನಗರದಲ್ಲಿ 12, ಭಟ್ಕಳದಲ್ಲಿ 8, ದಾವಣಗೆರೆಯಲ್ಲಿ 6, ತುಮಕೂರಿನಲ್ಲಿ 4, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಬೀದರ್‌ನಲ್ಲಿ ತಲಾ 3, ವಿಜಯಪುರ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ. ರಾಜ್ಯದ ಒಟ್ಟು 794 ಸೋಂಕಿತರ ಪೈಕಿ 386 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು 30 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!     

error: Content is protected !!
Scroll to Top