ರಾಜ್ಯದಲ್ಲಿ ಇಂದು 41 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 794 ಕ್ಕೆ ಏರಿಕೆ

ಬೆಂಗಳೂರು, ಮೇ 9: ರಾಜ್ಯದಲ್ಲಿ ಇಂದು ಒಂದೇ ದಿನ 41 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದಾವಣಗೆರೆ 6, ಬೆಂಗಳೂರು 12, ತುಮಕೂರು 4, ವಿಜಯಪುರ 1, ಬೀದರ್ 3, ದಕ್ಷಿಣ ಕನ್ನಡ 3, ಉತ್ತರ ಕನ್ನಡ 8, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ ಮತ್ತು ಚಿತ್ರದುರ್ಗ ಮೂವರಿಗೆ ಕೊರೋನ ಸೋಂಕು ಪತ್ತೆಯಾಗಿದೆ.

ಈ ಪೈಕಿ ಭಟ್ಕಳದ 1.5 ವರ್ಷದ ಗಂಡು ಮಗು, 2 ವರ್ಷ 6 ತಿಂಗಳ ಹೆಣ್ಣು ಮಗುವಿಗೆ ಸೋಂಕು ದೃಢಪಟ್ಟಿವೆ. ಅಲ್ಲದೇ, ಬೀದರ್ ನಲ್ಲಿ 12 ವರ್ಷದ ಬಾಲಕಿ, ವಿಜಯಪುರದ 11 ವರ್ಷದ ಬಾಲಕಿಯಲ್ಲಿ ಕೊರೋನ ಪಾಸಿಟಿವ್ ಬಂದಿದೆ.

Also Read  ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ - ಇಬ್ಬರು ಆರೋಪಿಗಳು ಅರೆಸ್ಟ್

ಇನ್ನೂ ಕಿಲ್ಲರ್ ಕೊರೋನ ಇದುವರೆಗೆ 30 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದು, ಸೋಂಕಿತರಾದಂತ 386 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಇಲಾಖೆ ತಿಳಿಸಿದೆ.

 

error: Content is protected !!
Scroll to Top