ವಿದೇಶದಿಂದ ಜಿಲ್ಲೆಗೆ ಬರುವವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ➤ 06 ಹಾಸ್ಟೆಲ್, 18 ಲಾಡ್ಜ್ ಸಜ್ಜು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ವಿದೇಶಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಅನಿವಾಸಿ ಭಾರತೀಯರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಜಿಲ್ಲಾಡಳಿತವು ಸಕಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, 6 ಹಾಸ್ಟೆಲ್‌ ಹಾಗೂ 18 ಖಾಸಗಿ ಹೊಟೇಲ್‌ ಮತ್ತು ಲಾಡ್ಜ್‌ಗಳನ್ನು ಸಿದ್ಧಪಡಿಸಲಾಗಿದೆ.

ಮೇ 12 ರಂದು ದುಬೈನಿಂದ 170 ಪ್ರಯಾಣಿಕರನ್ನು ಹೊತ್ತ ಮೊದಲ ವಿಮಾನವು ಮಂಗಳೂರಿಗೆ ಆಗಮಿಸಲಿದ್ದು, ಅದರಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಮಾತ್ರ ಮಂಗಳೂರಿನಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ ಮಾಡಲಾಗುತ್ತದೆ. ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಪ್ರಯಾಣಿಕರನ್ನು ಅವರವರ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗುತ್ತದೆ ಎಂದು ತಿಳಿದುಬಂದಿದೆ.

Also Read  ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top