ರಾಜ್ಯದಲ್ಲಿ ಇಂದು ದಾಖಲೆಯ 54 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ

ಬೆಂಗಳೂರು, ಮೇ 10: ರಾಜ್ಯದಲ್ಲಿ ಇಂದು ಬರೋಬ್ಬರಿ 54 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರವಿವಾರ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 54 ಕೊರೋನ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೋನ ಸೋಂಕು ಪತ್ತೆಯಾದ ನಂತರ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಬೆಂಗಳೂರು ನಗರ 3, ಬೆಳಗಾವಿ 22, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ದಾವಣಗೆರೆ ತಲಾ 1, ಕಲಬುರಗಿ 3, ಶಿವಮೊಗ್ಗ 8, ಬಾಗಲಕೋಟೆಯಲ್ಲಿ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜೊತೆಗೆ, ಶನಿವಾರ ಸಂಜೆ ಬೆಂಗಳೂರು ನಗರ ನಿವಾಸಿಯಾಗಿದ್ದ 56 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 848ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 31 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

Also Read  ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತ್ಯು

error: Content is protected !!
Scroll to Top